CEG Blog

ನಿಮ್ಮ ಯುವನಿಧಿ ಅರ್ಹತೆಯನ್ನು ಪರಿಶೀಲಿಸಿಕೊಳ್ಳಿ

maro news
ನಿಮ್ಮ ಯುವನಿಧಿ ಅರ್ಹತೆಯನ್ನು ಪರಿಶೀಲಿಸಿಕೊಳ್ಳಿ
ನಿಮ್ಮ ಯುವನಿಧಿ ಅರ್ಹತೆಯನ್ನು ಪರಿಶೀಲಿಸಿಕೊಳ್ಳಿ

ಯುವನಿಧಿ ಯೋಜನೆಗೆ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಚಾಲನೆ ನೀಡಲಾಗಿದ್ದು, ಯುವನಿಧಿ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಯುವನಿಧಿ ಯೋಜನೆಯು 2022-23ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆ ಆಗಿ 6 ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಮಾತ್ರ ಅನ್ವಯವಾಗಲಿದೆ.

ಯುವನಿಧಿಗೆ ಅರ್ಜಿ ಸಲ್ಲಿಸುವುದು ಹೇಗೆ?
 ಯುವನಿಧಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://sevasindhu.karnataka.gov.in ಸೇವಾಸಿಂಧು ಪೋರ್ಟಲ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಸೇರಿದಂತೆ ಇತರೆ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾದ ಅಗತ್ಯ ಇರುವುದಿಲ್ಲ.

ಯುವನಿಧಿ ಯೋಜನೆಯ ಲಾಭಗಳೇನು?
 ಯುವನಿಧಿ ಯೋಜನೆ ಮೂಲಕ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ಹಾಗೂ ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ. ಈ ಯೋಜನೆಯು ಕರ್ನಾಟಕ ರಾಜ್ಯದ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗಿರುತ್ತದೆ.  ಅರ್ಜಿ ಸಲ್ಲಿಸಿ ಆಯ್ಕೆಯಾದವರಿಗೆ ಯುವನಿಧಿ ಯೋಜನೆ ಹಣವನ್ನು ಡಿಬಿಟಿ ಮೂಲಕ ಒದಗಿಸಲಾಗುವುದು.

ಯಾರು ಯೋಜನೆಯ ಲಾಭವನ್ನು ಪಡೆಯಲು ಅರ್ಹರಿಲ್ಲ?
 ಯುವನಿಧಿ ಯೋಜನೆಯ ಲಾಭ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದವರಿಗೆ ದೊರೆಯುವುದಿಲ್ಲ. ಅಲ್ಲದೆ ಅಪ್ರೆಂಟಿಸ್‌ ಹುದ್ದೆಯಲ್ಲಿರುವವರಿಗೆ ಕೂಡ ಈ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಹೇಳಲಾಗಿದೆ

ಗಮನವಹಿಸಬೇಕಾದ ವಿಷಯ.
- ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವವರು ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು.
- ಉದ್ಯೋಗ ಇದ್ದರೂ ಕೂಡ ಯುವನಿಧಿ ಯೋಜನೆ ಲಾಭವನ್ನು ಮುಂದುವರಿಸಿಕೊಂಡು ಹೋದರೆ ದಂಡ ವಿಧಿಸಲಾಗುತ್ತದೆ.
- ಇದೇ ಕಾರಣಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಾವು ನಿರುದ್ಯೋಗಿಗಳೆಂದು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.
- ಇನ್ನೂ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಜೊತೆಗೆ ತಾವು ಉತ್ತರಿಸಿದ ದಿನಾಂಕದಿಂದ 6 ತಿಂಗಳ ತಮ್ಮ ಅಧಿಕೃತ ಬ್ಯಾಂಕ್ ಖಾತೆಯ ವಹಿವಾಟು ಸ್ಟೇಟ್‌ಮೆಂಟ್ ಪ್ರತಿಯನ್ನು ಸಲ್ಲಿಸಬೇಕು.
- ಒಂದು ವೇಳೆ ಬ್ಯಾಂಕ್‌ಗೆ ಪ್ರತಿ ಸಲ್ಲಿಸದಿದ್ದರೆ ಅರ್ಜಿ ತಿರಸ್ಕಾರವಾಗುತ್ತದೆ.

ಯುವನಿಧಿ ಯೋಜನೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗೂ ಅರ್ಹತೆಯನ್ನು ಪರಿಶೀಲಿಸಿಕೊಳ್ಳಲು, ನೀಡಲಾದ ಲಿಂಕನ್ನು ಬಳಸಿಕೊಂಡು, nad.karnataka.gov.in Yuva Nidhi Eligibility Check ಎಂಬ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ ಪರಿಶೀಲಿಸಿ.


Admin

Admin

 

1 ಕಾಮೆಂಟ್‌ಗಳು.

ಪ್ರತಿಕ್ರಿಯೆಯನ್ನು ಬಿಡಿ

ಕಾಮೆಂಟ್ ಅನ್ನು ಪೋಸ್ಟ್ ಮಾಡಲು ನೀವು ಲಾಗಿನ್ ಮಾಡಬೇಕು. ಈಗಾಗಲೇ ಸದಸ್ಯ ಲಾಗಿನ್ ಮಾಡಿ | ಹೊಸ ನೋಂದಣಿ